Saturday, June 6, 2026
HomeUncategorizedಶಾಸಕ ಸುನೀಲ್ ಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ: ರಾಧಾಕೃಷ್ಣ ಹಿರ್ಗಾನ

ಶಾಸಕ ಸುನೀಲ್ ಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ: ರಾಧಾಕೃಷ್ಣ ಹಿರ್ಗಾನ

- Advertisement -
- Advertisement -

ಕಾರ್ಕಳ (ಉಡುಪಿ): ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ಹಾಗೂ ಬಿಜೆಪಿ ಪದಾಧಿಕಾರಿಗಳು ತನ್ನ ಮೇಲೆ ದೇಶದ್ರೋಹದ ಕೇಸು ದಾಖಲಾಗದಿದ್ದರೂ ದೇಶದ್ರೋಹದ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿದ್ದೆನೆ ಎಂದು ರಾಧಾಕೃಷ್ಣ ಹಿರ್ಗಾನ ಹೇಳಿದ್ದಾರೆ..

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇನಾದರು ದೇಶದ್ರೋಹದ ಪೋಸ್ಟ್ ಹಾಕಿದ್ದಾರೆ, ಸೈನಿಕರಿಗೆ ಅವಹೇಳನ ಮಾಡಿದ್ದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ದ. ಗಲ್ಲಿಗೇರಲು ಕೂಡ ಸಿದ್ದನಿದ್ದೇನೆ ಎಂದು ಹೇಳಿದ್ದು, ಶಾಸಕರು ಅಥವಾ ಅವರ ಯಾರೇ ಪದಾಧಿಕಾರಿಗಳು ಯಾವುದೇ ಪವಿತ್ರ ಸ್ಥಳದಲ್ಲಿ ಪ್ರಮಾಣ ಮಾಡುಲು ಸಿದ್ಧರಿದ್ದಾರೆಯೇ ಎಂದು ಸವಾಲೆಸೆದಿದ್ದಾರೆ.

ಈ ಹಿಂದೆ ನಾನು ಮೂರ್ನಾಲ್ಕು ಬಾರಿ ಠಾಣೆಗೆ ಹಾಜರಾದ ಸಂದರ್ಭದಲ್ಲಿ, ಒಂದು ಬಾರಿ ನನ್ನ ಹೇಳಿಕೆಯನ್ನು ಪಡೆದಿದ್ದು, ಪ್ರತಿ ಬಾರಿಯೂ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದ್ದೆ.
ಅದಾಗ್ಯೂ ತಾನು ತಲೆ ಮರೆಸಿಕೊಂಡಿದ್ದೆ ಎಂದು ಶಾಸಕರು ಸುಳ್ಳು ಹೇಳಿದ್ದಾರೆ ಎಂದು ರಾಧಾಕೃಷ್ಣ ನಾಯಕ್ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯೋಧರ ವಿರುದ್ಧ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ರಾಧಾಕೃಷ್ಣ ನಾಯಕ್ ಅವರಿಗೆ ಕಾರ್ಕಳ ಟೌನ್ ಎಸ್ ಐ ಮಧು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ

- Advertisement -

Latest News

error: Content is protected !!