Friday, June 5, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ವಿಸ್ತರಣೆ

ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ವಿಸ್ತರಣೆ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ವಿಸ್ತರಣೆಯಾಗಿದೆ.‌ ಕಳೆದ ಮೂರು ದಿನದಿಂದ ವರ್ಷಧಾರೆ ಸುರಿಯುತ್ತಿರುವ ಕಾರಣ ಮುಂದಿನ ಐದು ದಿನ ಜಿಲ್ಲೆಗೆ ಆರೆಂಜ್ ಅಲರ್ಟ್ ವಿಸ್ತರಣೆ ಮಾಡಲಾಗಿದೆ. ಆರೆಂಜ್ ಅಲರ್ಟ್ ವಿಸ್ತರಣೆ ಮಾಡಿ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದ್ದು, ಎರಡು ದಿನ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ‌ ನೀಡಲಾಗಿದೆ.

40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ನಾಡದೋಣಿ ಮೀನುಗಾರಿಕೆ ನಡೆಸದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ನದಿ ಮತ್ತು ಸಮುದ್ರ ತೀರದ ಜನರು ಎಚ್ಚರಿಕೆ ವಹಿಸುವಂತೆಯೂ ಮಾಹಿತಿ ನೀಡಲಾಗಿದೆ.

- Advertisement -

Latest News

error: Content is protected !!