Saturday, June 13, 2026
Homeಕರಾವಳಿಉಡುಪಿಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್ ಆರ್ ಟಿಸಿ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್ ಆರ್ ಟಿಸಿ

- Advertisement -
- Advertisement -

ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಯಿಂದ ಶುಭ ಸುದ್ದಿ ಬಂದಿದೆ.‌ ಇದೇ ತಿಂಗಳು ನಡೆಯಲಿರುವ ಎಸ್ ಎಸ್ ಎಲ್ ಸಿ‌ ಪರೀಕ್ಷೆ ಸಮಯದಲ್ಲಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.‌ ಜುಲೈ 19 ಹಾಗೂ ಜುಲೈ 22 ರಂದು‌ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಲಭ್ಯವಾಗಲಿದೆ.‌ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರದವರೆಗೂ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣಕ್ಕೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅವಕಾಶ ಇದೆ. ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಪರೀಕ್ಷೆಗೆ ತೆರಳುವಾಗ ಹಾಗೂ ವಾಪಸ್ ಮನೆಗೆ ಬರುವಾಗ ಪ್ರಯಾಣಿಸಿಬಹುದಾಗಿದೆ. ಎರಡು ದಿನಗಳ ಕಾಲ ಉಚಿತ ಪ್ರಯಾಣದ ಬಗ್ಗೆ ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಸಿ. ಕಳಸದ್ ಸುತ್ತೋಲೆ ಹೊರಡಿಸಿದ್ದಾರೆ. ಜುಲೈ ಮತ್ತು 22 ರಂದು ರಾಜ್ಯಾದ್ಯಂತ ಕೋವಿಡ್ ಮಾರ್ಗಸೂಚಿಗಳ‌ ಅನ್ವಯ ಎಸ್ ಎಸ್ ಎಲ್‌ ಸಿ ಪರೀಕ್ಷೆ ನಡೆಯಲಿದೆ.

- Advertisement -

Latest News

error: Content is protected !!