Thursday, June 4, 2026
Homeಕರಾವಳಿಉಡುಪಿಮಳೆ ಹಿನ್ನೆಲೆ: ಉಡುಪಿ ಮತ್ತು ಚಿಕ್ಕಮಗಳೂರು ಡಿಸಿಗಳ ಜೊತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವೀಡಿಯೋ...

ಮಳೆ ಹಿನ್ನೆಲೆ: ಉಡುಪಿ ಮತ್ತು ಚಿಕ್ಕಮಗಳೂರು ಡಿಸಿಗಳ ಜೊತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವೀಡಿಯೋ ಕಾನ್ಫರೆನ್ಸ್

- Advertisement -
- Advertisement -

ಉಡುಪಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಭೆ ನಡೆಸಿದ್ದಾರೆ.‌ ತಮ್ಮ ದೆಹಲಿಯ ಕಛೇರಿ ಕೃಷಿ ಭವನದಿಂದ ವೀಡಿಯೋ ಕಾನ್ಫೆರನ್ಸ್ ಮೂಲಕ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆಯೂ ಆಗಿರುವ ಶೋಭಾ ಕರಂದ್ಲಾಜೆ ಸಭೆ ನಡೆಸಿದ್ದಾರೆ. ಮಳೆಯಿಂದಾಗಲಿರುವ ಪ್ರಕೃತಿ ವಿಕೋಪಗಳ ಕುರಿತು, ಜಿಲ್ಲೆಗಳಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಶೋಭಾ ಕರಂದ್ಲಾಜೆ ಮಾಹಿತಿ ಪಡೆದಿದ್ದಾರೆ.

ಮಳೆ ಹಾನಿ‌ ಕುರಿತಂತೆ ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಡಿಸಿಗಳಿಗೆ ಸೂಚಿಸಿದ್ದು, ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಎರಡೂ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ.

- Advertisement -

Latest News

error: Content is protected !!