- Advertisement -
![]()
- Advertisement -
ಬಂಟ್ವಾಳ: ವಿಟ್ಲ ಪಟ್ಟಣ ಪಂಚಾಯಿತಿ ಆಡಳಿತ ಅವಧಿ ಮುಗಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದಿನ ಚುನಾವಣೆಯವರೆಗೆ ಆಡಳಿತಾಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರು ಜವಾಬ್ದಾರಿಯನ್ನು ಸ್ವೀಕರಿಸಿದರು.
ವಿಟ್ಲ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೇರಿಸಲಾಗಿತ್ತು. ಕಳೆದ ಬಾರಿ ವಿಟ್ಲ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಆಡಳಿತದ ಚುಕ್ಕಾಣಿ ಹಿಡಿದಿತ್ತು. ಇವರ ಆಡಳಿತಾವಧಿ ಜುಲೈ 15ಕ್ಕೆ ಆಡಳಿತ ಕೊನೆಗೊಂಡಿತ್ತು.
ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದ್ದು, ಅದರಂತೆ ಇಂದು ಅಧಿಕಾರ ಸ್ವೀಕರಿಸಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ಅವರು ಸ್ವಾಗತಿಸಿದರು.
ಈ ಸಂದರ್ಭ ವಿಟ್ಲ ಕಂದಾಯ ನಿರೀಕ್ಷಕ ದಿವಾಕರ, ಗ್ರಾಮ ಕರಣಿಕ ಪ್ರಕಾಶ್ ಉಪಸ್ಥಿತರಿದ್ದರು.
- Advertisement -


