Thursday, June 4, 2026
Homeಕರಾವಳಿಉಡುಪಿಬಕ್ರೀದ್ ಹಿನ್ನೆಲೆ: ಮಂಗಳೂರಿನಲ್ಲಿ 25 ಕ್ಕೂ ಹೆಚ್ಚು ಚೆಕ್ ಪೋಸ್ಟ್

ಬಕ್ರೀದ್ ಹಿನ್ನೆಲೆ: ಮಂಗಳೂರಿನಲ್ಲಿ 25 ಕ್ಕೂ ಹೆಚ್ಚು ಚೆಕ್ ಪೋಸ್ಟ್

- Advertisement -
- Advertisement -

ಮಂಗಳೂರು: ಜು.21ರಂದು ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರದಲ್ಲಿ 25ಕ್ಕೂ ಹೆಚ್ಚು ಚೆಕ್ ಪೋಸ್ಟ್ ತೆರೆಯಲಾಗಿದೆ. ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್‌ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯ ಪ್ರತಿಯೊಂದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲದೇ ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಗಡಿ ಭಾಗಗಳಲ್ಲಿ ಕೂಡಾ ಚೆಕ್‌ ಪೋಸ್ಟ್ ತೆರೆದು ಶಾಂತಿಯುತವಾಗಿ ಬಕ್ರೀದ್ ಆಚರಿಸಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ‌ತಿಳಿಸಿದ್ದಾರೆ.

ಈಗಾಗಲೇ ಧಾರ್ಮಿಕ ಕೇಂದ್ರಗಳ ಸುತ್ತ ಬಂದೋಬಸ್ತ್ ಮಾಡಲಾಗಿದ್ದು, ಸರಕಾರದ ಸೂಚನೆಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಈದ್ಗಾಗಳಲ್ಲಿ ಪ್ರಾರ್ಥನೆ ನಡೆಸಲು ಅವಕಾಶ ನೀಡಲಾಗುವುದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!