Sunday, May 26, 2024
Homeಕರಾವಳಿಉಡುಪಿಯೋಗ ಮಾಡುವಾಗ ಜಾರಿ ಬಿದ್ದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್: ಹಿರಿಯ ಕಾಂಗ್ರೆಸ್ ನಾಯಕನಿಗೆ...

ಯೋಗ ಮಾಡುವಾಗ ಜಾರಿ ಬಿದ್ದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್: ಹಿರಿಯ ಕಾಂಗ್ರೆಸ್ ನಾಯಕನಿಗೆ ಐಸಿಯುನಲ್ಲಿ ಚಿಕಿತ್ಸೆ

spot_img
- Advertisement -
- Advertisement -

ಮಂಗಳೂರು: ಯೋಗ ಮಾಡುವ ವೇಳೆ ಜಾರಿ ಬಿದ್ದು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಗಾಯಗೊಂಡಿದ್ದು, ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಬೆಳಗ್ಗೆ ಯೋಗ ಮಾಡುವ ಸಂದರ್ಭ‌ ಆಸ್ಕರ್ ಫೆರ್ನಾಂಡಿಸ್ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಯಾವುದೇ ಗಾಯವಾಗಿಲ್ಲವೆಂದು ಇದನ್ನು ನಿರ್ಲಕ್ಷಿಸಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು.

ಈ ಸಂದರ್ಭ ಪರೀಕ್ಷಿಸಿದಾಗ ತಲೆಯ ಒಳ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -
spot_img

Latest News

error: Content is protected !!