Saturday, June 6, 2026
Homeಕರಾವಳಿಉಡುಪಿಮಳೆ ಹಾನಿ: ಕರಾವಳಿ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

ಮಳೆ ಹಾನಿ: ಕರಾವಳಿ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

- Advertisement -
- Advertisement -

ಬೆಂಗಳೂರು: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಕರಾವಳಿ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಒಟ್ಟು ಹನ್ನೆರಡು ಜಿಲ್ಲೆಗಳ ಡಿಸಿಗಳಿಂದ ಸಿಎಂ ಯಡಿಯೂರಪ್ಪ ಮಾಹಿತಿ ಪಡೆದಿದ್ದಾರೆ‌. ವೀಡಿಯೋ ಕಾನ್ಫರೆನ್ಸ್ ನಲ್ಲಿ ಕರಾವಳಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ, ಎಸ್ಪಿ ಸೇರಿದಂತೆ ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲೆಗಳಲ್ಲಿ ಮಳೆಯಿಂದ ಆಗಿರುವ ಹಾನಿ, ಕಡಲ್ಕೊರೆತ ಕುರಿತಂತೆ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.

ಇದೇ ವೇಳೆ ಪರಿಹಾರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಹಣಕಾಸಿನ ನೆರವನ್ನು ಒದಗಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಕರಾವಳಿಯಲ್ಲಿ ಮಳೆಯಿಂದ ಆಗಿರುವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ. ವೀಡಿಯೋ ಕಾನ್ಫರೆನ್ಸ್ ನಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ‌, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಕೂಡಾ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!