Wednesday, June 3, 2026
Homeಇತರರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್!

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್!

- Advertisement -
- Advertisement -

ಬೆಂಗಳೂರು: ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇಕಡಾ 11ರಷ್ಟು ತುಟ್ಟಿಭತ್ಯೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 11.25ರಷ್ಟಿದ್ದು, ಈ ಹೆಚ್ಚಳದ ಆದೇಶ ಜಾರಿಯಾದರೆ ನೌಕರರ ಮೂಲ ವೇತನಕ್ಕೆ ಅನ್ವಯವಾಗುವಂತೆ ಶೇ. 22.25ರಷ್ಟು ತುಟ್ಟಿಭತ್ಯೆ ಸಿಗಲಿದೆ. ಕೋವಿಡ್ ಹಿನ್ನೆಲೆಯಲ್ಲಿ 2020ರ ಜನವರಿಯಿಂದ ನೀಡಬೇಕಾದ ಮೂರು ತುಟ್ಟಿಭತ್ಯೆಗಳನ್ನು ಸರ್ಕಾರ ತಡೆ ಹಿಡಿದಿತ್ತು. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ. 11ರಷ್ಟು ತುಟ್ಟಿಭತ್ಯೆ ನೀಡುವ ತೀರ್ಮಾನ ಕೈಗೊಂಡಿತ್ತು. ಕೇಂದ್ರ ಸರ್ಕಾರದ ಆದೇಶ ಮಂಗಳವಾರವಷ್ಟೇ ಹೊರಬಿದ್ದಿದ್ದು, ಈ ಬೆನ್ನಲ್ಲೇ, ಮುಖ್ಯಮಂತ್ರಿ ಭೇಟಿ ಮಾಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯದಲ್ಲೂ ತುಟ್ಟಿಭತ್ಯೆ ಹೆಚ್ಚಿಸುವಂತೆ ಮನವಿ ಮಾಡಿತ್ತು. ಮನವಿಯನ್ನು ಸಿಎಂ ಯಡಿಯೂರಪ್ಪ ಅನುಮೋದಿಸಿದ್ದು, ಕೂಡಲೇ ಜಾರಿ ಮಾಡುವಂತೆ ಸೂಚನೆ ನೀಡಿದ್ದಾರೆ. ಎರಡು ಅಥವಾ ಮೂರು ದಿನಗಳಲ್ಲಿ ಈ ಕುರಿತ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

- Advertisement -

Latest News

error: Content is protected !!