Thursday, June 4, 2026
Homeಕರಾವಳಿಉಡುಪಿಮಂಗಳೂರಿನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾದ ಯುವಕರು

ಮಂಗಳೂರಿನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾದ ಯುವಕರು

- Advertisement -
- Advertisement -

ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಕದ್ದು ಯುವಕರು ಪರಾರಿಯಾದ ಘಟನೆ ಮಂಗಳೂರಿನ ಕುಳಾಯಿ ಎಂಬಲ್ಲಿ ನಡೆದಿದೆ.

ಇಲ್ಲಿನ ಗ್ರಾಮ ಸಂಘದ ಹಿಂಭಾಗದ ನಿವಾಸಿ ಬಾಲಕೃಷ್ಣ ಪುರೋಹಿತ್ ಅವರ ಮನೆಗೆ ಹಾಡಹಗಲೇ ಕಳ್ಳನೋರ್ವ ನುಗ್ಗಿ ಅವರ ಪತ್ನಿ ಸುಮತಿ ಬಾಲಕೃಷ್ಣ ಆಚಾರ್ಯ ಅವರ ಕುತ್ತಿಗೆಯಿಂದ ನಾಲ್ಕು ಪವನ್ ಚಿನ್ನದ ಕರಿಮಣಿಯನ್ನು ಸೆಳೆದು ಪರಾರಿಯಾಗಿದ್ದಾನೆ.

ಇಬ್ಬರು ಯುವಕರು ಮಧ್ಯಾಹ್ನ ಮನೆಗೆ ಆಗಮಿಸಿ ಕಾಲಿಂಗ್ ಬೆಲ್ ಒತ್ತಿದ್ದಾರೆ. ಈ ವೇಳೆ ಸುಮತಿ ಅವರು ಮನೆಯ ಬಾಗಿಲು ತೆರೆದು ಹೊರಬಂದು ವಿಚಾರಿಸಿದಾಗ ತಕ್ಷಣ ಓರ್ವ ವ್ಯಕ್ತಿ ಸುಮತಿ ಅವರನ್ನು ಟವೆಲ್ ನಿಂದ ಒತ್ತಿ ಹಿಡಿದು ಕರಿಮಣಿ ಎಳೆದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ,ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ನಡೆಸಿದ್ದಾರೆ. ಸಿಸಿ ಟಿವಿಯಲ್ಲಿ ಕೃತ್ಯ ಎಸಗಿ ಕಳ್ಳ ಓಡುತ್ತಿರುವ ದೃಶ್ಯ ಸೆರೆಯಾಗಿದೆ.

- Advertisement -

Latest News

error: Content is protected !!