- Advertisement -
- Advertisement -
ಬಂಟ್ವಾಳ: ರಾಜ್ಯ ಕಾಂಗ್ರೆಸ್ ಕಾರ್ಮಿಕ ವಿಭಾಗ ಸಮಿತಿಯ ಉಪಾಧ್ಯಕ್ಷ, ಕರ್ನಾಟಕ ಮುಸ್ಲಿಮ್ ಫೋರಂನ ಸ್ಥಾಪಕ ಅಧ್ಯಕ್ಷ, ಯುವ ಉದ್ಯಮಿ ಡಾ. ಕೆ.ಎಸ್.ಅಮೀರ್ ಅಹ್ಮದ್ ತುಂಬೆ (47) ಗುರುವಾರ ತಡ ರಾತ್ರಿ ನಿಧನರಾಗಿದ್ದಾರೆ.
ಅರಫಾ ಗ್ರೂಪ್ ತುಂಬೆ ಇದರ ನಿರ್ದೇಶಕ ಕೆ. ಸಾವುಞಿ ಹಾಜಿ ಅವರ ಪುತ್ರ ಅಮೀರ್ ತುಂಬೆ ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ಮತ್ತಷ್ಟು ಉಲ್ಬಣಿಸಿದ ಹಿನ್ನೆಲೆಯಲ್ಲಿ ಅವರನ್ನು ಮತ್ತೊಂದು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕೊಂಚ ಚೇತರಿಕೆ ಕಂಡಿದ್ದ ಅವರ ಆರೋಗ್ಯದಲ್ಲಿ ಎರಡು ದಿನಗಳ ಹಿಂದೆ ಮತ್ತೆ ಏರುಪೇರಾಗಿ ಗುರುವಾರ ರಾತ್ರಿ 1:30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ತಂದೆ, ಸಹೋದರ ಸಹೋದರಿಯರು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -