Thursday, June 4, 2026
Homeಕರಾವಳಿಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ : ಲಘು ವಾಹನಗಳಿಗಷ್ಟೇ ಓಡಾಟಕ್ಕೆ ಅವಕಾಶ

ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ : ಲಘು ವಾಹನಗಳಿಗಷ್ಟೇ ಓಡಾಟಕ್ಕೆ ಅವಕಾಶ

- Advertisement -
- Advertisement -

ಹಾಸನ: ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ‌- 75ರ ಶಿರಾಡಿ ಘಾಟ್ ರಸ್ತೆಯ ದೋಣಿಗಾಲ್ ಸಮೀಪ ನಿರಂತರ ಮಳೆಗೆ ಹೆದ್ದಾರಿ ಕುಸಿದಿದ್ದು, ಸದ್ಯ ಹೆದ್ದಾರಿ ದುರಸ್ಥಿ ಕಾರ್ಯ ಸಂಪೂರ್ಣವಾಗಿದೆ. ಶಿರಾಡಿ ಘಾಟ್ ಹೆದ್ದಾರಿ ಮತ್ತೆ ತೆರೆದುಕೊಂಡಿದ್ದು, ಶಿರಾಡಿ ಘಾಟ್ ರಸ್ತೆಯಲ್ಲಿ ಬೃಹತ್ ವಾಹನ‌ಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಇಂದಿನಿಂದ ಮುಂದಿನ ಆದೇಶದವರೆಗೂ ಶಿರಾಡಿ ಘಾಟ್ ರಸ್ತೆಯಲ್ಲಿ ಬೃಹತ್ ವಾಹನಗಳ ಸಂಚಾರ ನಿರ್ಬಂಧ ಹೇರಲಾಗಿದೆ. ಆದರೆ ಲಘು ವಾಹನಗಳಿಗೆ ಓಡಾಡಲು ಅವಕಾಶ ನೀಡಲಾಗಿದೆ. ಲಘು ವಾಹನಗಳ ಓಡಾಟಕ್ಕೂ ಜಿಲ್ಲಾಡಳಿತ ಹಲವು ನಿಯಮಗಳನ್ನು ಮಾಡಿದೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ‌. ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ವಾಹನಗಳ‌ ಸಂಚಾರ ನಿಷೇಧ ಮಾಡಲಾಗಿದೆ.

ಕಾರು, ಜೀಪ್, ದ್ವಿಚಕ್ರ ವಾಹನಗಳು, ಮಿನಿ ಟೆಂಪೋ, ಸಾರಿಗೆ ಬಸ್‌ಗಳಿಗೆ ಅವಕಾಶ ನೀಡಲಾಗಿದ್ದು, ಟ್ಯಾಂಕರ್, ರಾಜಹಂಸ, ಐರಾವತ ಕಂಟೇನರ್ ವಾಹನಗಳಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ.

ಘನ ವಾಹನಗಳು ಹಾಸನ- ಬೇಲೂರು- ಮೂಡಿಗೆರೆ ಚಾರ್ಮಾಡಿ ಘಾಟ್ ಮೂಲಕ ಮಂಗಳೂರಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.‌ ಘನ ಲಾರಿಗಳಿಗೆ ಮಾಣಿ- ಮೈಸೂರು ರಸ್ತೆಯ ಮೂಲಕ ಸಂಚರಿಸಲು ಸೂಚನೆ ನೀಡಲಾಗಿದೆ‌.

- Advertisement -

Latest News

error: Content is protected !!