Monday, August 31, 2026
Homeಕರಾವಳಿಮಂಗಳೂರು: ಆಸ್ಕರ್ ಫೆರ್ನಾಂಡಿಸ್ ಶಸ್ತ್ರ ಚಿಕಿತ್ಸೆ ಯಶಸ್ವಿ!

ಮಂಗಳೂರು: ಆಸ್ಕರ್ ಫೆರ್ನಾಂಡಿಸ್ ಶಸ್ತ್ರ ಚಿಕಿತ್ಸೆ ಯಶಸ್ವಿ!

- Advertisement -
- Advertisement -

ಮಂಗಳೂರು: ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್​ಗೆ (80) ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಆಸ್ಕರ್ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದನ್ನು ಶಸ್ತ್ರ ಚಿಕಿತ್ಸೆ ಮೂಲಕ ತೆಗೆದು ಹಾಕಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಯೆನೆಪೊಯ ಆಸ್ಪತ್ರೆಯ ಡಾ. ದಿವಾಕರ್ ರಾವ್, ಎ.ಜೆ. ಆಸ್ಪತ್ರೆಯ ಡಾ.ಸುನೀಲ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ನೆರವೇರಿಸಿತು.

ಯೋಗ ಮಾಡುವ ಸಂದರ್ಭ ಬಿದ್ದು ತಲೆಗೆ ಏಟಾಗಿ ಯೆನಪೋಯ ಆಸ್ಪತ್ರೆಯಲ್ಲಿ ಕಳೆದೊಂದು ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫರ್ನಾಂಡಿಸ್​ ರವರಿಗೆ ಶೀಘ್ರ ಪ್ರಜ್ಞಾ ಬರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!