Sunday, June 7, 2026
Homeತಾಜಾ ಸುದ್ದಿಅಶ್ಲೀಲ ಸಿನಿಮಾ ಪ್ರಕರಣ: ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಕಸ್ಟಡಿ!

ಅಶ್ಲೀಲ ಸಿನಿಮಾ ಪ್ರಕರಣ: ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಕಸ್ಟಡಿ!

- Advertisement -
- Advertisement -

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಉದ್ಯಮಿ ಹಾಗೂ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಅಶ್ಲೀಲ ಚಿತ್ರ ಪ್ರಕರಣದಲ್ಲಿ ರಾಜ್ ಕುಂದ್ರಾ ಮತ್ತು ರಯಾನ್ ಥೋರ್ಪ್ ಅವರ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಪೊಲೀಸರು ಅವರನ್ನು ಇಂದು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನಡೆದ ವಾದ-ಪ್ರತಿವಾದಗಳಲ್ಲಿ ರಾಜ್ ಕುಂದ್ರಾಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಜಾಮೀನಿಗೆ ಆಗ್ರಹಿಸಿದ ರಾಜ್ ಕುಂದ್ರಾ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಾಳೆ ನಡೆಯಲಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 420 (ಮೋಸ), 34 (ಸಾಮಾನ್ಯ ಉದ್ದೇಶ), 292 ಮತ್ತು 293 (ಅಶ್ಲೀಲ ಮತ್ತು ಅಸಭ್ಯ ಜಾಹೀರಾತುಗಳು ಮತ್ತು ಪ್ರದರ್ಶನಗಳಿಗೆ ಸಂಬಂಧಿಸಿದ) ಮತ್ತು ಐಟಿ ಕಾಯ್ದೆಯ ಸಂಬಂಧಿತ ವಿಭಾಗಗಳು, ಮಹಿಳಾ (ನಿಷೇಧ) ಕಾಯ್ದೆ ಮತ್ತು ಅಸಭ್ಯ ಪ್ರಾತಿನಿಧ್ಯದ ಅಡಿಯಲ್ಲಿ ರಾಜ್ ಕುಂದ್ರಾ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

- Advertisement -

Latest News

error: Content is protected !!