Friday, June 5, 2026
Homeತಾಜಾ ಸುದ್ದಿರಾಜ್ಯದ ಮುಖ್ಯಮಂತ್ರಿ ಆಯ್ಕೆಗೆ ಕ್ಷಣಗಣನೆ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆಗೋದು ಬಹುತೇಕ ಖಚಿತ

ರಾಜ್ಯದ ಮುಖ್ಯಮಂತ್ರಿ ಆಯ್ಕೆಗೆ ಕ್ಷಣಗಣನೆ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆಗೋದು ಬಹುತೇಕ ಖಚಿತ

- Advertisement -
- Advertisement -

ಬೆಂಗಳೂರು : ಬಿಎಸ್ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವಂತ ಮುಖ್ಯಮಂತ್ರಿ ಸ್ಥಾನಕ್ಕೆ, ನೂತನ ಸಿಎಂ ಆಯ್ಕೆ ಕಸರತ್ತು ಅಂತಿಮವಾಗುತ್ತಿದೆ. ನೂತನ ಸಿಎಂ ಆಯ್ಕೆ ಕುರಿತಂತೆ ರಾಜ್ಯಕ್ಕೆ ಕೇಂದ್ರದಿಂದ ವೀಕ್ಷಕರಾಗಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ನೇಮಕಗೊಂಡಿದ್ದಾರೆ. ಈ ಇಬ್ಬರು ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ.

 ಇನ್ನು ಸಿಎಂ ರೇಸ್ ಸದ್ಯ ಗೃಹಸಚಿವರಾಗಿರುವ ಬಸವ್ ರಾಜ್ ಬೊಮ್ಮಾಯಿ ಅವರ ಹೆಸರು ಕೇಳಿ ಬರುತ್ತಿದ್ದು ಅವರು ಸಿಎಂ ಆಗೋದು ಫಿಕ್ಸ್ ಅಂತಾ ಹೇಳಲಾಗುತ್ತಿದೆ. ಅಲ್ಲದೇ ಅಧಿಕೃತ ಘೋಷಣೆಯೊಂದೇ ಬಾಕಿ ಎಂದು ಹೇಳಲಾಗುತ್ತಿದೆ. ಕೆಲವೇ ಕ್ಷಣಗಳಲ್ಲಿ ಅವರ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ ಎನ್ನಲಾಗಿದೆ. ಕೋರ್ ಕಮಿಟಿ ಸಭೆಯಲ್ಲೂ ಅವರ ಹೆಸರು ಖಚಿತವಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.

- Advertisement -

Latest News

error: Content is protected !!