Thursday, June 4, 2026
Homeಕರಾವಳಿಕೇರಳದ ಪಾಲಕ್ಕಾಡ್ ನಲ್ಲಿ ಭಾರೀ ದುರಂತ : ತೈಲ ಸೋರಿಕೆಯಿಂದ 20 ಮಂದಿಗೆ ಗಾಯ

ಕೇರಳದ ಪಾಲಕ್ಕಾಡ್ ನಲ್ಲಿ ಭಾರೀ ದುರಂತ : ತೈಲ ಸೋರಿಕೆಯಿಂದ 20 ಮಂದಿಗೆ ಗಾಯ

- Advertisement -
- Advertisement -

ಕೇರಳ: ಇಲ್ಲಿನ ಪಾಲಕ್ಕಾಡ್‌ ಜಿಲ್ಲೆಯ ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ತೈಲ ಸೋರಿಕೆಯಾದ ಪರಿಣಾಮ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದಾರೆ.

ಪಾಲಕ್ಕಾಡ್‌ನ ತಿರುವಿಳಕುನ್ನು ಎಂಬಲ್ಲಿ ನಿನ್ನೆ ಸಂಜೆ ಸುಮಾರು 5 ಗಂಟೆಗೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯೂ ಸೇರಿದಂತೆ ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಘಟಕವು ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾಗ ತೈಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ.

ತಕ್ಷಣವೇ ಅವರು ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಾಯ ಕೋರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸುತ್ತಿರುವ ನಡುವೆಯೇ ತೈಲ ಟ್ಯಾಂಕ್‌ನಲ್ಲಿ ಬಿಸಿ ಹೆಚ್ಚಳವಾಗಿ ಸ್ಫೋಟ ಸಂಭವಿಸಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!