Sunday, June 7, 2026
Homeಆರಾಧನಾಮೇಕೆದಾಟು ಯೋಜನೆ ವಿರೋಧಿಸಿ ಆ.5 ರಂದು ಅಣ್ಣಾಮಲೈ ಉಪವಾಸ ಸತ್ಯಾಗ್ರಹ!!

ಮೇಕೆದಾಟು ಯೋಜನೆ ವಿರೋಧಿಸಿ ಆ.5 ರಂದು ಅಣ್ಣಾಮಲೈ ಉಪವಾಸ ಸತ್ಯಾಗ್ರಹ!!

- Advertisement -
- Advertisement -

ಚೆನ್ನೈ : ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಆಗಸ್ಟ್ 5 ರಂದು ಕರ್ನಾಟಕ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾಮಲೈ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಬಸವರಾಜ ಬೊಮ್ಮಾಯಿ ಅವರು ಮೇಕೆದಾಟು ಅಣೆಕಟ್ಟನ್ನು ಕಟ್ಟುವುದಾಗಿ ಹೇಳಿದ್ದಾರೆ. ನಾವು ಒಂದೇ ಪಕ್ಷದಲ್ಲಿದ್ದರೂ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತೇವೆ. ಆಗಸ್ಟ್ 5 ರಂದು ಕರ್ನಾಟಕ ಸರ್ಕಾರದ ವಿರುದ್ಧ ಉಪವಾಸ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ನಾವು ಮೇಕೆದಾಟು ವಿಷಯವಾಗಿ ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ.ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದರೂ ತಮಿಳುನಾಡು ಬಿಜೆಪಿ ಇಲ್ಲಿನ ಜನರ, ರೈತರ ಹಿತಾಸಕ್ತಿಯ ಪರವಾಗಿ ಕಾರ್ಯನಿರ್ವಹಿಸಲಿದೆ. ತಮಿಳುನಾಡು ರೈತರು ಯಾವುದೇ ಸಮಸ್ಯೆಯನ್ನು ಎದುರಿಸಬಾರದು. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ತನ್ನ ಪಾಲಿನ ಕಾವೇರಿ ನೀರನ್ನು ಪಡೆಯಬೇಕು ಎಂದು ಹೇಳಿದ್ದಾರೆ.

ಆಗಸ್ಟ್ 5ರಂದು ಕೆ. ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಶಾಸಕರು, ಪಕ್ಷದ ಕಾರ್ಯಕರ್ತರು ಸೇರಿ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಕರ್ನಾಟಕ ಸರ್ಕಾರ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಲಿದ್ದಾರೆ.

- Advertisement -

Latest News

error: Content is protected !!