Saturday, June 6, 2026
Homeಕರಾವಳಿಉಪ್ಪಿನಂಗಡಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ: ನಿವೃತ್ತ ಸೈನಿಕ ಬಂಧನ

ಉಪ್ಪಿನಂಗಡಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ: ನಿವೃತ್ತ ಸೈನಿಕ ಬಂಧನ

- Advertisement -
- Advertisement -

ಉಪ್ಪಿನಂಗಡಿ: ಮಹಿಳೆಗೆ ಹಲ್ಲೆ ನಡೆಸಿದ ಆರೋಪದಲ್ಲಿ ನಿವೃತ್ತ ಯೋಧನನ್ನು ಬಂಧಿಸಿರುವ ಘಟನೆ  ಉಪ್ಪಿನಂಗಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಜಯಕುಮಾರ್ ಪೂಜಾರಿ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಶಬರಿಗಿರಿ ಮನೆ ನಿವಾಸಿ ಶಶಿಕುಮಾರ್ ಪಿಳ್ಳೆ ಅವರ ಪತ್ನಿ ಆಶಾ ಎಂಬವರಿಗೆ ಎ.15 ರಂದು ಆರೋಪಿ ಕಲ್ಲೆಸೆದು ಕಣ್ಣಿಗೆ ಗಾಯ ಮಾಡಿ, ಅವ್ಯಾಚ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆಶಾ ಅವರು ಪುತ್ತೂರು ಡಿವೈಎಸ್ಪಿ ಅವರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಅದರಂತೆ ಆರೋಪಿಯನ್ನು ಇದೀಗ ಬಂಧಿಸಲಾಗಿದೆ.

- Advertisement -

Latest News

error: Content is protected !!