Thursday, June 4, 2026
Homeಅಪರಾಧಲಂಚ ಪಡೆದ ಪಿಡಿಒಗೆ 7 ವರ್ಷ ಜೈಲು

ಲಂಚ ಪಡೆದ ಪಿಡಿಒಗೆ 7 ವರ್ಷ ಜೈಲು

- Advertisement -
- Advertisement -

ಮಡಿಕೇರಿ: ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಮಡಿಕೇರಿ ತಾಲ್ಲೂಕಿನ ನರಿಯಂದಡ ಗ್ರಾಮ ಪಂಚಾಯಿತಿ ಪಿಡಿಒ ಸಚಿನ್‌ ಎಂಬಾತನಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಕೊಡಗು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯ ಆರೋಪಿಗೆ ಒಟ್ಟು 7 ವರ್ಷ ಜೈಲು ಶಿಕ್ಷೆ ಹಾಗೂ 8 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ನಾಲ್ಕು ವರ್ಷಗಳ ಹಿಂದೆ ನಿವೇಶನದ ದಾಖಲೆ ನೀಡಲು, ನರಿಯಂದಡ ಗ್ರಾಮದ ಸುಬ್ರಹ್ಮಣ್ಯ ಅವರಿಂದ 3 ಸಾವಿರ ರೂಪಾಯಿ ಲಂಚಕ್ಕೆ ಸಚಿನ್ ಬೇಡಿಕೆಯಿಟಿದ್ದರು. ಹೀಗಾಗಿ ಸುಬ್ರಮಣ್ಯ ಅವರು ಎಸಿಬಿಗೆ ದೂರು ನೀಡಿದ್ದರು. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಲಂಚ ತೆಗೆದುಕೊಳ್ಳುವಾಗ ಪಿಡಿಒ ಸಚಿನ್ ಎಸಿಬಿ ಬಲೆಗೆ ಬಿದ್ದಿದ್ದರು.

ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಭ್ರಷ್ಟಾಚಾರ ನಿರೋಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!