Thursday, June 4, 2026
Homeತಾಜಾ ಸುದ್ದಿದೇವೇಗೌಡರ ಮನೆಯಲ್ಲಿ ಸಿಎಂ ಬೊಮ್ಮಾಯಿ!

ದೇವೇಗೌಡರ ಮನೆಯಲ್ಲಿ ಸಿಎಂ ಬೊಮ್ಮಾಯಿ!

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ್ದ ಬೊಮ್ಮಾಯಿ, ಕೆಲವು ಹೊತ್ತು ಮಾತುಕತೆ ನಡೆಸಿ ವಾಪಸಾಗಿದ್ದಾರೆ.

ಮೂಲತ: ಜನತಾ ಪರಿವಾರದವರೇ ಆಗಿರುವ ಬಸವರಾಜ ಬೊಮ್ಮಾಯಿ, ಸಿಎಂ ಆದ ಹಿನ್ನೆಲೆಯಲ್ಲಿ ದೇವೇಗೌಡರ ಆಶೀರ್ವಾದ ಪಡೆದಿದ್ದಾರೆ. ಭೇಟಿ ವೇಳೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ ಮತ್ತು ವಿ. ಸೋಮಣ್ಣ ಉಪಸ್ಥಿತರಿದ್ದರು.

ಮಾತುಕತೆ ವೇಳೆ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ನೀರಾವರಿ ಸೇರಿ ಕೆಲವು ವಿಚಾರಗಳ ಬಗ್ಗೆ ಸಿಎಂಗೆ ದೇವೇಗೌಡರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ, ದೇವೇಗೌಡರ ಭೇಟಿ ಖುಷಿ ತಂದಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!