Sunday, June 7, 2026
Homeಕರಾವಳಿಆಗಸ್ಟ್ 23 ರಿಂದ 9,10, ಪಿಯುಸಿ ತರಗತಿ ಪ್ರಾರಂಭ: ರಾಜ್ಯಾದ್ಯಂತ ರಾತ್ರಿ 9 ರಿಂದ ನೈಟ್...

ಆಗಸ್ಟ್ 23 ರಿಂದ 9,10, ಪಿಯುಸಿ ತರಗತಿ ಪ್ರಾರಂಭ: ರಾಜ್ಯಾದ್ಯಂತ ರಾತ್ರಿ 9 ರಿಂದ ನೈಟ್ ಕರ್ಫ್ಯೂ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ 9, 10 ಹಾಗೂ ಪಿಯುಸಿ ತರಗತಿಗಳನ್ನು ಆಗಸ್ಟ್ 23 ರಿಂದ ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಭೆಯಲ್ಲಿ ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ಹಾಗೂ ರಾಜ್ಯದ ಕೋವಿಡ್ ಸ್ಥಿತಿಗತಿಯನ್ನು ಆಧರಿಸಿ, ಪ್ರಾಥಮಿಕ ಶಾಲೆ ಮತ್ತು 8ನೇ ತರಗತಿ ಪ್ರಾರಂಭಿಸುವ ಬಗ್ಗೆ ಆಗಸ್ಟ್ ತಿಂಗಳ ಅಂತ್ಯದಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ನಿರ್ಧರಿಸಿದ್ದು, ಶಾಲೆ ಕಾಲೇಜುಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅಲ್ಲದೇ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ರಾತ್ರಿ 10ರ ಬದಲು 9ರಿಂದ ಬೆಳಗ್ಗೆ 5ರವರೆಗೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ರಾತ್ರಿ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಸೂಚಿಸಿದ್ದಾರೆ.

- Advertisement -

Latest News

error: Content is protected !!