Wednesday, August 26, 2026
Homeಕರಾವಳಿಕಾಂಗ್ರೆಸ್​ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶ

ಕಾಂಗ್ರೆಸ್​ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶ

- Advertisement -
- Advertisement -

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್​ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಕ್ಷಬೇಧ ಮರೆತು ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು. ಕೇಂದ್ರದ ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸಮಾಜ ಕಲ್ಯಾಣ ಮತ್ತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು, ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಇಲ್ಲವೇ ಅವರ ಕುಟುಂಬಸ್ಥರಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.

1941 ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು ದಿಲ್ಲಿಯಲ್ಲಿ ನಂತರ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದರು. 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ ಆಸ್ಕರ್ ಫರ್ನಾಂಡಿಸ್ ಅವರು ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸಾರಿಗೆ ಸಚಿವ, ಕಾರ್ಮಿಕ ಸಚಿವರಾಗಿ ಆಸ್ಕರ್ ಫರ್ನಾಂಡಿಸ್ ಕಾರ್ಯ ನಿರ್ವಹಿಸಿದ್ದರು.

- Advertisement -

Latest News

error: Content is protected !!