- Advertisement -
![]()
- Advertisement -
ಮುಂಬೈ: ಕಳೆದ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಜುಹುನಲ್ಲಿರುವ ಅಮಿತಾಭ್ ಬಚ್ಚನ್ ನಿವಾಸ ಹಾಗೂ ಮುಂಬೈನ ಮೂರು ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಪೊಲೀಸರು ಕರೆ ಮಾಡಿದ ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಿದಾಗ, ಕರೆ ಮಾಡಿದ ವ್ಯಕ್ತಿ ಠಾಣೆ ಜಿಲ್ಲೆಯ ಮುಂಬ್ರಾ ಬಳಿಯ ಶಿಲ್ ಫಟಾ ಪ್ರದೇಶದಲ್ಲಿದ್ದಾನೆ ಎಂಬುದು ಗೊತ್ತಾಗಿದ್ದು,ಕೊನೆಗೂ ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.
ಬಂಧಿತರಲ್ಲಿ ಒಬ್ಬ ವ್ಯಕ್ತಿ ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಟ್ರಕ್ ಚಾಲಕನಾಗಿದ್ದು, ಅವನೊಬ್ಬ ಮದ್ಯವ್ಯಸನಿ ಎಂದು ತಿಳಿದುಬಂದಿದೆ. ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
- Advertisement -


