Saturday, June 13, 2026
Homeಕರಾವಳಿಉಡುಪಿಬ್ರಹ್ಮಾವರ: ಕಂಟೈನರ್‌ ಲಾರಿಗೆ ಕಾರು ಢಿಕ್ಕಿ; ಕಾರಿನಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರಿಗೆ ಗಾಯ!

ಬ್ರಹ್ಮಾವರ: ಕಂಟೈನರ್‌ ಲಾರಿಗೆ ಕಾರು ಢಿಕ್ಕಿ; ಕಾರಿನಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರಿಗೆ ಗಾಯ!

- Advertisement -
- Advertisement -

ಬ್ರಹ್ಮಾವರ:ಬ್ರಹ್ಮಾವರ ಬಳಿಯ ಹೇರೂರು ಸೇತುವೆ ಮೇಲೆ ಕಂಟೈನರ್‌ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಮಂಗಳೂರಿನಿಂದ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ರಸ್ತೆಯ ಗುಂಡಿ ತಪ್ಪಿಸಲು ಪ್ರಯತ್ನಿಸಿ ವಾಹನದ ನಿಯಂತ್ರಣ ಕಳೆದುಕೊಂಡು ಕಂಟೈನರ್‌ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ.ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಶೂಟಿಂಗ್‌ ಹಿನ್ನೆಲೆ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದ್ದು,ಕಾರನ್ನು ಓರ್ವ ಮಹಿಳೆ ಚಲಾಯಿಸುತ್ತಿದ್ದಳು ಎಂದು ವರದಿಯಾಗಿದೆ. ಬೆಳಿಗ್ಗೆ 7.14 ರ ಸುಮಾರಿಗೆ ಅಪಘಾತ ಸಂಭವಿಸಿದ್ದು ಗಾಯಗೊಂಡವರ ಗುರುತುಗಳು ಇನ್ನೂ ತಿಳಿದಿಲ್ಲ.

ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತು.ಬ್ರಹ್ಮಾವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!