Sunday, June 7, 2026
Homeತಾಜಾ ಸುದ್ದಿಸರ್ಕಾರಿ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಹಾರ, ತುರಾಯಿ, ಹೂಗುಚ್ಛ ನಿಷೇಧ!: ರಾಜ್ಯ ಸರ್ಕಾರದಿಂದ ಆದೇಶ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಇನ್ಮುಂದೆ ಹಾರ, ತುರಾಯಿ, ಹೂಗುಚ್ಛ ನಿಷೇಧ!: ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯದ ಸಂಸ್ಥೆಗಳ ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಇಂದು ವಿಧಾನಸೌಧದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನಾವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು.

ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದ್ದಾರೆ‌.

ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ

- Advertisement -

Latest News

error: Content is protected !!