Friday, July 4, 2025
Homeಕರಾವಳಿಬಂಟ್ವಾಳ: ಪೆಟ್ರೋಲಿಯಂ ಪೈಪ್ ಲೈನ್ ಗೆ ಕನ್ನ ಪ್ರಕರಣ; ಮೂವರ ಬಂಧನ !

ಬಂಟ್ವಾಳ: ಪೆಟ್ರೋಲಿಯಂ ಪೈಪ್ ಲೈನ್ ಗೆ ಕನ್ನ ಪ್ರಕರಣ; ಮೂವರ ಬಂಧನ !

spot_img
- Advertisement -
- Advertisement -

ಬಂಟ್ವಾಳ: ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಸಹಿತ ಮೂವರನ್ನು ಬಂಧಿಸಿದ್ದಾರೆ.

ಅರಳ ಗ್ರಾಮದ, ಸೊರ್ನಾಡು ಅರ್ಬಿ ನಿವಾಸಿ ಐವನ್ ಚಾರ್ಲ್ ಪಿಂಟೋ, (43) ಹಾಗೂ ಕೃತ್ಯದಲ್ಲಿ ಪೈಪ್ ಲೈನ್ ಗೆ ಹೋಲ್ ತೆಗೆದು ವೆಲ್ಡಿಂಗ್ ಮಾಡಿ ಪೈಪ್ ಲೈನ್ ಅಳವಡಿಸಿದ ವೆಲ್ಡರ್ ಗಳಾದ ಪಚ್ಚನಾಡಿ ಬೋಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್ ಪ್ರೀತಮ್ ಡಿ’ಸೋಜನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳ ಗ್ರಾಮದಲ್ಲಿ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಅನ್ನು ಕೊರೆದು,ಅದಕ್ಕೆ ಪೈಪ್ ಅಳವಡಿಸಿ ಜುಲೈ 11 ರಿಂದ ಸುಮಾರು 40 ಲಕ್ಷದ ಪೆಟ್ರೋಲಿಯಂ ಉತ್ಪನ್ನ ಕಳ್ಳತನ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂದು ಜೀಪ್, ಡಿಸೇಲ್ ಕೊಂಡು ಹೋಗಲು ಬಳಸಿದ ಕ್ಯಾನ್ ಗಳು ಮತ್ತು ಡಿಸೇಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣದಲ್ಲಿ ಇನ್ನೂ ಹಲವಾರು ಪ್ರಮುಖ ಆರೋಪಿಗಳಿದ್ದು ಸದ್ಯ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.

ಪೊಲೀಸ್ ಅಧೀಕ್ಷಕರು ಹೃಷಿಕೇಶ್ ಸೋನಾವಣೆ ನಿರ್ದೇಶನದಂತೆ, ಬಂಟ್ವಾಳ ಉಪವಿಭಾಗ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿಸೋಜರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಟಿ.ಡಿ ನಾಗರಾಜ್ ರವರ ನೇತೃತ್ವದ ತಂಡದ ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ, ಹೆಚ್.ಸಿಗಳಾದ ಜನಾರ್ಧನ, ಗೋಣಿಬಸಪ್ಪ, ಸುರೇಶ್ ಪಿ.ಸಿಗಳಾದ ಮನೋಜ್, ಪುನೀತ್ ರವರು ಪಾಲ್ಗೊಂಡಿರುತ್ತಾರೆ.

- Advertisement -
spot_img

Latest News

error: Content is protected !!