Saturday, June 13, 2026
Homeಕರಾವಳಿಉಡುಪಿಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಆಗಮಿಸಿದ ಸಿಎಂ: ಮಂಗಳೂರು ಏರ್ ಪೋರ್ಟ್ ನಲ್ಲಿ ತಿಲಕ ಇಟ್ಟು ಸ್ವಾಗತ

ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಆಗಮಿಸಿದ ಸಿಎಂ: ಮಂಗಳೂರು ಏರ್ ಪೋರ್ಟ್ ನಲ್ಲಿ ತಿಲಕ ಇಟ್ಟು ಸ್ವಾಗತ

- Advertisement -
- Advertisement -

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿನ ಕೋವಿಡ್ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಂಗಳೂರಿನ ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ‌ ಸಿಎಂಗೆ ತಿಲಕ ಇಟ್ಟು ಸ್ವಾಗತಿಸಲಾಯಿತು.

ಮಹಿಳಾ ಬಿಜೆಪಿ ಕಾರ್ಯಕರ್ತೆಯರು ಸಿಎಂಗೆ ಹಣೆಗೆ ತಿಲಕ‌ ಇಟ್ಟು‌ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಎಂ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಸುಧಾಕರ್, ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯು.ಟಿ. ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಸೇರಿದಂತೆ ಜಿಲ್ಲೆಯ ಶಾಸಕರು ಪಾಲ್ಗೊಂಡಿದ್ದರು.

ಅಲ್ಲದೇ ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

- Advertisement -

Latest News

error: Content is protected !!