Thursday, June 4, 2026
Homeಕರಾವಳಿಉಡುಪಿಉಡುಪಿಯ ಬಾಂಧವ್ಯದ ಬಗ್ಗೆ ಮಾತನಾಡಿ ಭಾವುಕರಾದ ಸಿಎಂ!

ಉಡುಪಿಯ ಬಾಂಧವ್ಯದ ಬಗ್ಗೆ ಮಾತನಾಡಿ ಭಾವುಕರಾದ ಸಿಎಂ!

- Advertisement -
- Advertisement -

ಉಡುಪಿ: ಸದ್ಯ ಉಡುಪಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಉಡುಪಿಯ ಬಾಂಧವ್ಯದ ಬಗ್ಗೆ ಮಾತನಾಡಿ ಭಾವುಕರಾಗಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ಬೊಮ್ಮಾಯಿಯವರು ಉಡುಪಿಗೆ ಬಂದಿವುದು ಬಹಳ ವಿರಳ. ಮುಖ್ಯಮಂತ್ರಿಯಾಗಿ ಉಡುಪಿಗೆ ಬಂದ ಬೊಮ್ಮಾಯಿ ತಾನು ಉಸ್ತುವಾರಿ ಸಚಿವನಾಗಿದ್ದಾಗ ಉಡುಪಿಗೆ ಬರದೇ ಇದ್ದುದರ ಬಗ್ಗೆ, ಉಡುಪಿಯ ಶ್ರೀಕೃಷ್ಣನ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ.ಯಡಿಯೂರಪ್ಪ ಉಡುಪಿಗೆ ನನ್ನನ್ನು ಉಸ್ತುವಾರಿ ಮಾಡಿದ್ದರು. ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಉಡುಪಿಯ ಜನರು ಹೃದಯ ವೈಶಾಲ್ಯ ಉಳ್ಳವರು. ತಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಃ ವೈಯಕ್ತಿಕವಾಗಿ ಏನೂ ಕೇಳುವುದಿಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಯಡಿಯೂರಪ್ಪರ ಬಳಿ ಸದಾ ಕೇಳುತ್ತಿದ್ದೆ. ಆದರೆ ಸಿಎಂ ಆಗುವ ಮೂಲಕ ಉಸ್ತುವಾರಿಯನ್ನು ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಸಿಎಂ ಬೊಮ್ಮಾಯಿ ಭಾವುಕರಾಗಿ ಮಾತನಾಡಿದ್ದಾರೆ.

- Advertisement -

Latest News

error: Content is protected !!