- Advertisement -
![]()
- Advertisement -
ಬೆಂಗಳೂರು : ಕರ್ನಾಟಕ-ಕೇರಳ ಮಧ್ಯೆ ಸಂಚಾರಕ್ಕೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನೋಟಿಸ್ ನೀಡಿದೆ.
ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಕೇಂದ್ರ ಆರೋಗ್ಯ ಸಚಿವಾಲಯದ ಪ್ರತಿನಿಧಿಗಳಿಗೆ ಕೇರಳ ಹೈಕೋರ್ಟ್ ನೋಟಿಸ್ ನೀಡಿದ್ದು, ಹೈಕೋರ್ಟ್ ಗೆ ಆಗಸ್ಟ್ 17 ರಂದು ಹಾಜರಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.
ಕರ್ನಾಟಕ ಸರ್ಕಾರ ಕೇಂದ್ರದ ಕೋವಿಡ್ ನಿಯಾಮಾವಳಿಗಳನ್ನು ಉಲ್ಲಂಘಿಸಿದೆ ಎಂದು ಮಂಜೇಶ್ವರದ ಸಿಪಿಎಂ ಮುಖಂಡ ಕೆ.ಆರ್. ಜಯಾನಂದ್ ಕೇರಳ ಹೈಕೋರ್ಟ್‌ನಲ್ಲಿ ನಾಗರಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಮಾಡಿದ ಕೇರಳ ಹೈಕೋರ್ಟ್ ಇದೀಗ ಸ್ಪಷ್ಟೀಕರಣ ಕೋರಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೊಟೀಸ್ ನೀಡಿದೆ.
- Advertisement -


