Sunday, June 7, 2026
Homeಕರಾವಳಿಕಬಕ: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್ ಡಿಪಿಐ ಕಾರ್ಯಕರ್ತರು: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ!

ಕಬಕ: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್ ಡಿಪಿಐ ಕಾರ್ಯಕರ್ತರು: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ!

- Advertisement -
- Advertisement -

ಪುತ್ತೂರು: ಕಬಕದಲ್ಲಿ ಸ್ವಾತಂತ್ರ್ಯದ ರಥವನ್ನು ತಡೆದು ದಾಂಧಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದ್ದಾರೆ.

ಕಬಕ ಜಂಕ್ಷನ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಹಾಗು ಹಿಂದು ಸಂಘಟನೆಯ ಮುಖಂಡರು ಪ್ರತಿಭಟನೆಯಲ್ಲಿ ಭಾಗಹಿಸಿದ್ದು, ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲಾಗಿದೆ.ಎಸ್.ಡಿಪಿಐ ಪಕ್ಷದ ವಿರುದ್ಧ ಚುನಾವಣಾ ಆಯೋಗಕ್ಕೆ ಪಕ್ಷ ನಿಷೇಧಿಸುವಂತೆ ದೂರು ನೀಡಲು ತೀರ್ಮಾನಿಸಲಾಗಿದೆ.

ಗ್ರಾಮ ಗ್ರಾಮಗಳಲ್ಲಿ ವೀರ ಸಾವರ್ಕರ್ ರಥಯಾತ್ರೆ ನಡೆಸಲು ಹಿಂದೂ ಸಂಘಟನೆಗಳು ನಿರ್ಧಾರ ಮಾಡಿದೆ ಎಂದು ಹಿಂದೂ ಮುಖಂಡ ಶರಣ್ ಪಂಪುವೆಲ್ ಹೇಳಿಕೆ ನೀಡಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆ ಅಜೀಜ್ (43), ಶಮೀರ್ (40) ಅಬ್ದುಲ್ ರೆಹಮಾನ್ (34) ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!