Saturday, June 6, 2026
Homeಕರಾವಳಿಉಡುಪಿಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಮಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಾಗಲಿದೆ ಎಂದು ತಿಳಿಸಿದೆ. ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸೂಚನೆಯಿದ್ದು, ಮೀನುಗಾರಿಕೆಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

- Advertisement -

Latest News

error: Content is protected !!