Sunday, June 7, 2026
Homeಕರಾವಳಿಉಡುಪಿಉಡುಪಿ ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಉಡುಪಿ ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

- Advertisement -
- Advertisement -

ಉಡುಪಿ: ಉಡುಪಿ ಕೃಷ್ಣ ಮಠಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಕಿಂಡಿಯ ಮೂಲಕ ಕಡಗೋಲು ಕೃಷ್ಣನ ದರ್ಶನ ಮಾಡಿದ ಸಚಿವೆ ಶೋಭಾ ಬಳಿಕ ರಥಬೀದಿಯಲ್ಲಿರುವ ಅಷ್ಟ ಮಠಗಳಿಗೆ ಭೇಟಿ ನೀಡಿದ್ದಾರೆ‌.

ಅನಂತೇಶ್ವರ ಚಂದ್ರಮೌಳೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಶೋಭಾ ಕರಂದ್ಲಾಜೆ, ಪರ್ಯಾಯ ಅದಮಾರು ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ‌ಇದೇ ವೇಳೆ ಅಷ್ಟ ಮಠಗಳಿಂದ ನೂತನ ಸಚಿವರಿಗೆ ಗೌರವ ಸಲ್ಲಿಕೆಯಾಗಿದೆ‌.

ಉಡುಪಿಯಲ್ಲಿ ಇಂದು ಜನಾಶೀರ್ವಾದ ಯಾತ್ರೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವೆ ಶೋಭಾ ಉಡುಪಿ ಜಿಲ್ಲಾ ಪ್ರವಾಸದಲ್ಲಿ ಇದ್ದಾರೆ.

ಕೇಂದ್ರ ಸಚಿವೆಯಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!