Thursday, June 4, 2026
Homeಕೊಡಗುಕೊಡಗು ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಕಟ್ಟಡಕ್ಕೆ ಶಂಕುಸ್ಥಾಪನೆ

ಕೊಡಗು ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಕಟ್ಟಡಕ್ಕೆ ಶಂಕುಸ್ಥಾಪನೆ

- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಶತಮಾನೋತ್ಸವ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ‌ ಇಂದು ನೆರವೇರಿತು.‌ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಡಿಸಿಸಿ ಬ್ಯಾಂಕ್ ಕಚೇರಿ ಆವರಣದಲ್ಲಿ ಶತಮಾನೋತ್ಸವ ಭವನದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಇದೇ ವೇಳೆ ಡಿಸಿಸಿ ಬ್ಯಾಂಕ್‍ನ ಸಂಚಾರಿ ಬ್ಯಾಂಕ್ ವಾಹನಕ್ಕೆ ಶಾಸಕ ಕೆ.ಜಿ. ಬೋಪಯ್ಯ ಅವರು ಚಾಲನೆ ನೀಡಿದರು. ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಎಂ.ಸಿ. ನಾಣಯ್ಯ, ಬಿ.ಕೆ. ಚಿಣ್ಣಪ್ಪ, ಕೆ.ಎ. ಉತ್ತಪ್ಪ, ಎಂ.ಎ. ರಮೇಶ್, ಬಿ.ಡಿ. ಮಂಜುನಾಥ್, ಮಾಜಿ ಉಪಾಧ್ಯಕ್ಷರಾದ ಶಾಂತಕುಮಾರ್. ಕೆ.ಎಂ. ಮಂದಣ್ಣ, ಭರತ್ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಡಿಸಿಸಿ ಬ್ಯಾಂಕಿನ ನಿರ್ದೇಶಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.


ಸಭಾ ಕಾರ್ಯಕ್ರಮದ ಮೊದಲು ಬ್ಯಾಂಕಿನ ಇತಿಹಾಸ ಬಿಂಬಿಸುವ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಿತು. ಬ್ಯಾಂಕಿನ ಸಿಬ್ಬಂದಿ ಬೋಜಮ್ಮ ಮತ್ತು ತಂಡದವರು ಪ್ರಾರ್ಥಿಸಿದರು.

ಬ್ಯಾಂಕಿನ ಇಒ ಬಿ.ಕೆ. ಸಲೀಂ ಸ್ವಾಗತಿಸಿ, ಡಾ. ವಿಜಯ ಅಂಗಡಿ ಮತ್ತು ಆರ್. ಮಂಜುಳ ನಿರೂಪಿಸಿದರು, ಬ್ಯಾಂಕಿನ ಉಪಾಧ್ಯಕ್ಷರಾದ ಕೇಟೋಳಿರ ಹರೀಶ್ ಪೂವಯ್ಯ ವಂದಿಸಿದರು.

- Advertisement -

Latest News

error: Content is protected !!