Thursday, June 4, 2026
Homeಕರಾವಳಿಆ.23 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ- ಲುಕ್ಮಾನ್ ಬಂಟ್ವಾಳ್

ಆ.23 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ- ಲುಕ್ಮಾನ್ ಬಂಟ್ವಾಳ್

- Advertisement -
- Advertisement -

ಬೆಳ್ತಂಗಡಿ: ದ.ಕ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆ.23 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಮತ್ತು ಪಕ್ಷದ ವತಿಯಿಂದ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಹೇಳಿದರು.

ಅವರು ಆ.20 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶವನ್ನು ಯುವ ಜನತೆಗೆ ತಲುಪಿಸುವಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಸಂದರ್ಭದಲ್ಲಿ ನಾರಾಯಣ ಗುರುಗಳ ಬಗ್ಗೆ ವಿಚಾರ ಸಂಕೀರ್ಣ ನಡೆಯಲಿದೆ

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರುಗಳು, ಜಿಲ್ಲಾ ನಾಯಕರುಗಳು ಭಾಗವಹಿಸಲಿದ್ದಾರೆ ಎಂದರು.ಪ್ರತಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಮನ್ನಾರ್ ಮನ್ನಾನ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ, ಕೆಪಿಸಿಸಿ ಕಾರ್ಯದರ್ಶಿ ಹೈಕೋರ್ಟ್ ವಕೀಲ ರಕ್ಷಿತ್ ಶಿವರಾಂ, ಯುವ ಇಂಟಕ್ ಅಧ್ಯಕ್ಷ  ನವೀನ್ ಗೌಡ ಸವಣಾಲು ಉಪಸ್ಥಿತರಿದ್ದರು.

- Advertisement -

Latest News

error: Content is protected !!