Saturday, October 17, 2026
Homeಕರಾವಳಿಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ;ಕೇಂದ್ರ ಸಚಿವ ನಾರಾಯಣ ರಾಣೆ ಪೊಲೀಸರ ವಶಕ್ಕೆ!

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ;ಕೇಂದ್ರ ಸಚಿವ ನಾರಾಯಣ ರಾಣೆ ಪೊಲೀಸರ ವಶಕ್ಕೆ!

- Advertisement -
- Advertisement -

ಮುಂಬೈ: ಮಹಾರಾಷ್ಟ್ರ ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.

ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡುತ್ತಿದ್ದ ವೇಳೆ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿ ರಾಣೆ ಹೇಳಿಕೆ ನೀಡಿದ್ದರು.

ರಾಣೆ ಹೇಳಿಕೆಗೆ ಶಿವಸೇನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಚಿವರನ್ನು ಬಂಧಿಸಬೇಕು ಎಂದು ಒತ್ತಾಯಿಸಿತ್ತು.ಇದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆ ಎಂಬ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ರತ್ನಾಗಿರಿ ಪೊಲೀಸರು ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಅರೆಸ್ಟ್ ಮಾಡಿದ್ದಾರೆ.

- Advertisement -

Latest News

error: Content is protected !!