Thursday, June 4, 2026
Homeಕರಾವಳಿಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪಿಕಪ್!

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪಿಕಪ್!

- Advertisement -
- Advertisement -

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ರಸ್ತೆ ಬದಿ ನಿಂತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.



ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ನಿಲ್ಲಿಸಿದ್ದ ಲಾರಿಗೆ ಮೂಡಿಗೆರೆಯ ಕಡೆಗೆ ಹೋಗುತ್ತಿದ್ದ ಪಿಕಪ್ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಲಾರಿಯ ಮುಂಭಾಗದ ಗಾಜು ಸಂಪೂರ್ಣವಾಗಿ ಪುಡಿಯಾಗಿದ್ದು, ಎರಡು ವಾಹನಗಳ ಚಾಲಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!