Thursday, July 3, 2025
Homeಕರಾವಳಿಮಂಗಳೂರು: ಇಂದು ರಾತ್ರಿಯಿಂದಲೇ ವಾರಾಂತ್ಯ ಕರ್ಫ್ಯೂ ಜಾರಿ!

ಮಂಗಳೂರು: ಇಂದು ರಾತ್ರಿಯಿಂದಲೇ ವಾರಾಂತ್ಯ ಕರ್ಫ್ಯೂ ಜಾರಿ!

spot_img
- Advertisement -
- Advertisement -

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಈ ಅವಧಿಯಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2 ಗಂಟೆವರೆಗೆ ಆಹಾರ, ದಿನಸಿ ಹಣ್ಣು-ತರಕಾರಿ, ಮೀನು-ಮಾಂಸ, ಹಾಲು, ನ್ಯಾಯಬೆಲೆ ಅಂಗಡಿ, ಪ್ರಾಣಿಗಳ ಆಹಾರ ಮಳಿಗೆಗಳಲ್ಲಿ ಹಾಗೂ ಬೀದಿಬದಿ ವ್ಯಾಪಾರ ನಡೆಸಲು ಅವಕಾಶವಿದೆ.

ಮದ್ಯ ಮಳಿಗೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2 ಗಂಟೆವರೆಗೆ ಪಾರ್ಸೆಲ್ ಗಳನ್ನು ನೀಡಲು ಅನುಮತಿ ನೀಡಲಾಗಿದೆ. ಹೊಟೇಲ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಆಹಾರ ಖಾದ್ಯಗಳ ಹೋಂ ಡೆಲಿವರಿಯನ್ನು ದಿನದ 24 ಗಂಟೆ ನಡೆಸಬಹುದು. ಬಸ್ ಸೇರಿದಂತೆ ಸಾರ್ವಜನಿಕ ಸಂಚಾರಕ್ಕೆ ಮಧ್ಯಾಹ್ನದವರೆಗೆ ಅನುಮತಿ ನೀಡಲಾಗಿದೆ.

- Advertisement -
spot_img

Latest News

error: Content is protected !!