Saturday, June 6, 2026
Homeಅಪರಾಧಮಂಗಳೂರು ವಿಮಾನ ನಿಲ್ದಾಣದಲ್ಲಿ 16 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟಕ್ಕೆ...

ಮಂಗಳೂರು ವಿಮಾನ ನಿಲ್ದಾಣದಲ್ಲಿ 16 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನ ; ಓರ್ವ ವಶಕ್ಕೆ

- Advertisement -
- Advertisement -

ಮಂಗಳೂರು:ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ ಆರೋಪದಲ್ಲಿ ಓರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ನಡೆದಿದೆ.

ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದ ಕಾಸರಗೋಡು ಮುಳಿಯಾರು ನಿವಾಸಿ ಮೊಹಮ ನವಾಸ್ ಸ್ಟೇಟಿಂಗ್ ಬೋರ್ಡ್‌ಗೆ ಚಿನ್ನದ ಚಕ್ರ ಮತ್ತು ಬೋಲ್ಟ್ ಜೋಡಿಸಿ ಅಕ್ರಮವಾಗಿ ಸಾಗಾಟ ಮಾಡಿರುವು ತಪಾಸಣೆ ವೇಳೆ ಪತ್ತೆಯಾಗಿದೆ.

ಆರೋಪಿಯಿಂದ 16,21,400 ರೂ. ಮೌಲ್ಯದ 335 ಗ್ರಾಂ ಚಿನ್ನವನ್ನು ವಶಪಡೆಯಲಾಗಿದ್ದು, ಈತ ಚಿನ್ನವನ್ನು ಸ್ಕೇಟಿಂಗ್ ಬೋರ್ಡ್ ಮತ್ತು ಅದರ ಚಕ್ರಕ್ಕೆ ಸಂಪರ್ಕ ಕಲ್ಪಿಸುವ ರಾಡ್ ಒಳಗೆ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.

- Advertisement -

Latest News

error: Content is protected !!