Saturday, June 6, 2026
HomeಇತರBREAKING NEWS: ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಮತ್ತೋರ್ವ ನಟಿ ಬಂಧನ...?

BREAKING NEWS: ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಮತ್ತೋರ್ವ ನಟಿ ಬಂಧನ…?

- Advertisement -
- Advertisement -

ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ನಟಿ ಸೋನಿಯಾ ಮನೆ ಸೇರಿದಂತೆ ಹಲವು ಸೆಲೆಬ್ರಿಟಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಗೋವಿಂದಪುರ ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಸೆಲೆಬ್ರಿಟಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಶೆಟ್ಟಿ, ಸೋನಿಯಾ ಮನೆ ಮೇಲೆ ದಾಳಿ ನಡೆಸಲಾಗಿದೆ.

ಡ್ರಗ್ಸ್ ಪೆಡ್ಲರ್ ಥಾಮಸ್ ನೀಡಿದ ಮಾಹಿತಿ ಮೇರೆಗೆ ಪದ್ಮನಾಭನಗರ, ರಾಜಾಜಿನಗರ, ಬೆನ್ಸೆನ್ ಟೌನ್ ನಲ್ಲಿರುವ ಮನೆಗಳ ಮೇಲೆ ದಾಳಿ ಮಾಡಲಾಗಿದ್ದು. ಪೊಲೀಸರು ಪರೀಶಲನೆ ನಡೆಸುತ್ತಿದ್ದಾರೆ. ಪರಿಶೀಲನೆ ವೇಳೆ ಸೆಲೆಬ್ರಿಟಿಗಳ ಮನೆಯಲ್ಲಿ ಮಾದಕ ವಸ್ತುಗಳು ಪತ್ತೆಯಾದ್ರೆ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Latest News

error: Content is protected !!