Wednesday, July 2, 2025
Homeಕರಾವಳಿಹಾವು ಕಡಿತದಿಂದ ಯುವಕ ಸಾವು...! ಪುಂಜಾಲಕಟ್ಟೆಯಲ್ಲಿ ನಡೆದ ಘಟನೆ...!

ಹಾವು ಕಡಿತದಿಂದ ಯುವಕ ಸಾವು…! ಪುಂಜಾಲಕಟ್ಟೆಯಲ್ಲಿ ನಡೆದ ಘಟನೆ…!

spot_img
- Advertisement -
- Advertisement -

ಪುಂಜಾಲಕಟ್ಟೆ: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಆ. 31ರ ಮಂಗಳವಾರ ಸಂಭವಿಸಿದೆ.

ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಉಸ್ಮಾನ್ ಅವರ ಪುತ್ರ ಆಸಿದ್( 26) ಮೃತಪಟ್ಟವರು. ಆಸಿದ್ ಅವರು ಕೂಲಿ ಕಾರ್ಮಿಕರಾಗಿದ್ದು, ವಾಮದಪದವು ಬಳಿ ಮಂಗಳವಾರ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹಾವಿನ ಕಡಿತಕ್ಕೊಳಗಾಗಿದ್ದರು.

ಬಳಿಕ ಅವರನ್ನು ಚಿಕಿತ್ಸೆ ಗಾಗಿ ಆಸ್ಪತ್ರೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರು ಉಸ್ಮಾನ್ ಅವರ ಮೂವರು ಪುತ್ರರಲ್ಲಿ ಕೊನೆಯವರಾಗಿದ್ದು ಅವಿವಾಹಿತರಾಗಿದ್ದರು.

- Advertisement -
spot_img

Latest News

error: Content is protected !!