Tuesday, June 9, 2026
Homeಕರಾವಳಿಮಂಗಳೂರುಮಂಗಳೂರು: ಹೋಂ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಪಂಜಾಬಿ ಮೂಲದ ಯುವತಿ ನಾಪತ್ತೆ...!

ಮಂಗಳೂರು: ಹೋಂ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಪಂಜಾಬಿ ಮೂಲದ ಯುವತಿ ನಾಪತ್ತೆ…!

- Advertisement -
- Advertisement -

ಮಂಗಳೂರು: ನಗರದಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಪಂಜಾಬಿ ಮೂಲದ ಯುವತಿ ಲಿಶ್ಬಾ(21) ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವತಿ ಲಿಶ್ಬಾ ‘ವಿ ಕೇರ್ ನರ್ಸಿಂಗ್ ಹೋಮ್’ ಪಿಜಿಯಲ್ಲಿ ಕೆಲಸ ಮಾಡುತ್ತಾ ಅದೇ ಪಿಜಿಯಲ್ಲಿ ನೆಲೆಸಿದ್ದಳು ಆಗಸ್ಟ್ 17ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಊರಿಗೆ ಹೋಗಿ ಬರುವುದಾಗಿ ಮಾಲಕರಿಗೆ ತಿಳಿಸಿದ್ದಾರೆ. ಆ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಕರೆ ಮಾಡಿದಾಗ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಪಿಜಿ ಮಾಲಕರು ಪರಿಚಯಸ್ಥರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ನಾಪತ್ತೆಯಾದ ಯುವತಿಯ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!