- Advertisement -
- Advertisement -
ಬಂಟ್ವಾಳ: ಬಿ.ಸಿ.ರೋಡ್ ತಲಪಾಡಿಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ,ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ.

ಗಾಯಗೊಂಡವರು ಫರಂಗಿಪೇಟೆಯ ಅಯ್ಕೆಮಾರ್ ನಿವಾಸಿಗಳು ಎಂದು ತಿಳಿದುಬಂದಿದೆ.ಬೈಕ್ ಸವಾರರಿಬ್ಬರು ಫರಂಗಿಪೇಟೆಯಿಂದ ಬಿ.ಸಿ.ರೋಡ್ ಕಡೆಗೆ ತೆರಳಿದ್ದು, ತಲಪಾಡಿ ಎಂಬಲ್ಲಿ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಘಟನೆಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -