Friday, June 5, 2026
Homeಕರಾವಳಿಕಾಸರಗೋಡುಕಾಸರಗೋಡು: ಬಸ್ ಹಾಗೂ ಲಾರಿ ನಡುವೆ ಅಪಘಾತ; ನಾಲ್ವರಿಗೆ ಗಾಯ

ಕಾಸರಗೋಡು: ಬಸ್ ಹಾಗೂ ಲಾರಿ ನಡುವೆ ಅಪಘಾತ; ನಾಲ್ವರಿಗೆ ಗಾಯ

- Advertisement -
- Advertisement -

ಕಾಸರಗೋಡು: ಕೆಎಸ್ಆರ್‌ಟಿ‍ಸಿ ಬಸ್ಸು ಹಾಗೂ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರಿನ ಙನಂಕೈಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮಧ್ಯಪ್ರದೇಶದಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಸರಕು ಲಾರಿ ಮತ್ತು ಕಣ್ಣೂರು ಕಡೆಯಿಂದ ಕಾಞ೦ಗಾಡ್‌ಗೆ ಬರುತ್ತಿದ ಬಸ್ಸು ನಡುವೆ ಅಪಘಾತ ನಡೆದಿದೆ.

ಲಾರಿಯಲ್ಲಿ ಸಿಲುಕಿದ್ದ ಚಾಲಕ ರಾಜೇಶ್ ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊರತೆಗೆದಿದ್ದು, ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತದ ಬಳಿಕ ಒಂದೂ ಗಂಟೆಗೂ ಅಧಿಕ ಸಮಯ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

- Advertisement -

Latest News

error: Content is protected !!