Thursday, June 4, 2026
Homeಕರಾವಳಿಚಾರ್ಮಾಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದವರ ಬಂಧನ!

ಚಾರ್ಮಾಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದವರ ಬಂಧನ!

- Advertisement -
- Advertisement -

ಚಾರ್ಮಾಡಿ: ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದವರನ್ನು ಪೊಲೀಸರು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಿದ್ದಾರೆ.

ಸೆಪ್ಟೆಂಬರ್ 2 ರಂದು ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಚಂದ್ರಶೇಖರ ಕೆ ರವರು ತಮ್ಮ ಸಿಬ್ಬಂದಿಗಳೊಂದಿಗೆ ರಾತ್ರಿ 08-30 ರ ಸುಮಾರಿಗೆ ಚಾರ್ಮಾಡಿ ಚೆಕ್ ಪೊಸ್ಟ್ ಬಳಿ ಕೆ.ಎ. 18 ಸಿ 3170 ನೊಂದಣಿಯ ಟಾಟಾ -ಎಸ್ ವಾಹನವನ್ನು ಪರಿಶೀಲಿಸಿದಾಗ, ವಾಹನದ ಹಿಂಬದಿಯಲ್ಲಿ 1 ಕೋಣ 2 ಎಮ್ಮೆಗಳನ್ನು ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಜಾನುವಾರುಗಳನ್ನು ಸಾಗಟ ಮಾಡಲು ಪರವಾನಿಗೆಯ ಬಗ್ಗೆ ವಿಚಾರಿಸಿದಾಗ ಆರೋಪಿಗಳು ಯಾವುದೇ ದಾಖಲಾತಿಗಳನ್ನು ಹಾಜರು ಪಡಿಸುವುದಿಲ್ಲ.ಜಾನುವಾರುಗಳನ್ನು ಆರೋಪಿಗಳು ಕೊಂದು ಮಾಂಸಮಾಡಿ ಅದರ ಮಾಂಸವನ್ನು ಹಣಕ್ಕಾಗಿ ಮಾರಾಟ ಮಾಡುವ ಉದ್ದೇಶಕ್ಕಾಗಿ ಜಾನುವಾರು ಸಾಗಾಟ ಮಾಡುವುದು ಕಂಡು ಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋ ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಯಂತೆ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!