- Advertisement -
- Advertisement -
ಬೆಳ್ತಂಗಡಿ: ಬೆಳ್ತಂಗಡಿಯ ಉದ್ಯಮಿ ಪುಷ್ಪರಾಜ್ ಶೆಟ್ಟಿಯವರು ತಾಲೂಕು ವರ್ತಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರದಂದು ಸಿವಿಸಿ ಹಾಲ್ ನಲ್ಲಿ ನಡೆದ ಮದ್ದಡ್ಕ, ಗುರುವಾಯನಕೆರೆ, ಬೆಳ್ತಂಗಡಿ, ಲಾಯಿಲ ವರ್ತಕರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಈಗಾಗಲೇ ಹಲವು ಸಂಘಟನೆಗಳ ಮೂಲಕ ತನ್ನನ್ನು ತಾನು ಗುರುತಿಸಿಕೊಂಡಿರುವ ಪುಷ್ಪರಾಜ್ ಶೆಟ್ಟಿ ಯವರು ನೇತ್ರಾವತಿ ನದಿ ತಿರುವು ಯೋಜನೆ ವಿರುದ್ಧ ಇವರ ನಾಯಕತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆದ ಬೃಹತ್ ಪ್ರತಿಭಟನೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು.ಸಮಾಜಮುಖಿ ಚಿಂತನೆಯೊಂದಿಗೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಇವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಎಲ್ಲರೂ ಇಚ್ಛೆ ವ್ಯಕ್ತಪಡಿಸಿದಾಗ ಎಲ್ಲರ ಒಪ್ಪಿಗೆಯಂತೆ ಅಧ್ಯಕ್ಷರನ್ನಾಗಿ ಆಯ್ಕೆಮಾಡಲಾಯಿತು.
- Advertisement -