Monday, June 30, 2025
Homeಅಪರಾಧಸೈಬರ್‌ ಕ್ರೈಂ ಪ್ರಕರಣ: ಕಡಬ ಮೂಲದ ಯುವಕನನ್ನು ಬಂಧಿಸಿದ ಕೊಲ್ಕತ್ತಾ ಪೊಲೀಸರು!

ಸೈಬರ್‌ ಕ್ರೈಂ ಪ್ರಕರಣ: ಕಡಬ ಮೂಲದ ಯುವಕನನ್ನು ಬಂಧಿಸಿದ ಕೊಲ್ಕತ್ತಾ ಪೊಲೀಸರು!

spot_img
- Advertisement -
- Advertisement -

ಕಡಬ: ಸೈಬರ್‌ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಪೊಲೀಸರು ಕಡಬದ ಯುವಕನೋರ್ವನನ್ನು ಶನಿವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಸಂಜಯ್‌ ಕೃಷ್ಣ ಎಂದು ಗುರುತಿಸಲಾಗಿದೆ. ಪ್ರಸಕ್ತ ಮಂಗಳೂರಿನಲ್ಲಿ ಟ್ರೇಡಿಂಗ್‌ ವ್ಯವಹಾರ ನಡೆಸುತ್ತಿದ್ದಾರೆಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಯೋರ್ವಳ ಹೆಸರಿನ ನಕಲಿ ಸಾಮಾಜಿಕ ಜಾಲತಾಣ ಖಾತೆ ತೆರೆದ ಆರೋಪದ ಮೇರೆಗೆ ಸಂಜಯ್‌ ಕೃಷ್ಣನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಯಾರೋ ಅಪರಿಚಿತರು ತನ್ನ ಹೆಸರಿನ ನಕಲಿ ಸಾಮಾಜಿಕ ಜಾಲತಾಣ ಖಾತೆಯನ್ನು ನಕಲಿಸಿ ಉಪಯೋಗಿಸುತ್ತಿರುವ ಬಗ್ಗೆ ಯುವತಿ ಪಶ್ಚಿಮ ಬಂಗಾಳದಲ್ಲಿ ದೂರು ದಾಖಲಿಸಿದ್ದಳು.

ಸೈಬರ್‌ ಕ್ರೈಂನಡಿ ದೂರು ದಾಖಲಿಸಿಕೊಂಡಿರುವ ಕೊಲ್ಕತ್ತಾ ಪೊಲೀಸರು ಇಂದು ಕಡಬಕ್ಕೆ ಆಗಮಿಸಿ ಆರೋಪಿ ಸಂಜಯ್‌ ಕೃಷ್ಣನನ್ನು ಬಂಧಿಸಿದ್ದು, ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ

- Advertisement -
spot_img

Latest News

error: Content is protected !!