Sunday, June 29, 2025
Homeಇತರಮಂಗಳೂರು ಸಿಸಿಬಿ ಪೊಲೀಸರ ಮುಂದೆ ಆರೋಪಿ ಕಿಶೋರ್ ಶೆಟ್ಟಿ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಬಗ್ಗೆ...

ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಆರೋಪಿ ಕಿಶೋರ್ ಶೆಟ್ಟಿ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಬಗ್ಗೆ ಹೇಳಿದ್ದೇನು ಗೊತ್ತಾ..?

spot_img
- Advertisement -
- Advertisement -

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ ಸೇವನೆ ಮಾಡುತ್ತಿದ್ದರು, ನಮ್ಮ ಜೊತೆಯೇ ಡ್ರಗ್ ತೆಗೆದುಕೊಳ್ಳುತ್ತಿದ್ದರು ಎಂದು ಡ್ರಗ್ ಪ್ರಕರಣದ A 2 ಆರೋಪಿ ಕಿಶೋರ್ ಶೆಟ್ಟಿ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸುಸ್ತಾಗಬಾರದು ಎಂಬ ಕಾರಣಕ್ಕೆ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಡ್ರಗ್ಸ್ ಬಂದಿತ್ತು. ಆ ವೇಳೆ ಅನುಶ್ರಿ ಡ್ರಗ್ ಸೇವನೆ ಮಾಡಿದ್ದರು ಎಂದು ಕಿಶೋರ್ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮದ ಕೊರಿಯೋಗ್ರಫಿ ಪ್ರಾಕ್ಟೀಸ್ ಮಾಡುವ ವೇಳೆ ಡ್ರಗ್ ಸೇವನೆ ಮಾಡುತ್ತಿದ್ದರು. ಡ್ಯಾನ್ಸ್ ಮಾಡಲು ಸುಸ್ತು ಆಗಬಾರದು ಎಂಬ ಕಾರಣಕ್ಕೆ ಡ್ರಗ್ ಸೇವನೆ ಮಾಡುತ್ತಿದ್ದರು ಎಂದು ಕಿಶೋರ್ ಹೇಳಿಕೆ ನೀಡಿದ್ದಾರೆ.

ಡ್ರಗ್ ಪ್ರಕರಣದ A1 ಆರೋಪಿ ತರುಣ್, A2 ಆರೋಪಿ ಕಿಶೋರ್ ಶೆಟ್ಟಿ ಮತ್ತು ಅನುಶ್ರೀ ಜೊತೆಯಲ್ಲೇ ಡ್ರಗ್ ಸೇವನೆ ಮಾಡುತ್ತಿದ್ದರು ಎಂಬುದನ್ನು ಸ್ವತಃ ಕಿಶೋರ್ ಶೆಟ್ಟಿಯೇ ಹೇಳಿಕೊಂಡಿದ್ದಾನೆ. ನಾವೆಲ್ಲ ಜೊತೆಯಲ್ಲಿ ಪಾರ್ಟಿ ಮಾಡುತ್ತಿದ್ದೆವು. ಆ ವೇಳೆ ಅನುಶ್ರೀ ಡ್ರಗ್ಸ್ ತರುತ್ತಿದ್ರು ಎಂದು ಕಿಶೋರ್ ಹೇಳಿಕೊಂಡಿದ್ದಾನೆ.

- Advertisement -
spot_img

Latest News

error: Content is protected !!