- Advertisement -
- Advertisement -
ಕಡಬ: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬದ ಹಿಂದುಸ್ತಾನ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಸ್ವಿಫ್ಟ್ ಡಿಸೈರ್, ಎರ್ಟಿಗಾ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.
ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಯ ಸ್ವಿಫ್ಟ್ ಡಿಸೈರ್ ಕಾರು ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಡೀಸೆಲ್ ತುಂಬಿಸಲೆಂದು ಪೆಟ್ರೋಲ್ ಬಂಕ್ ಗೆ ತಿರುಗುವ ವೇಳೆ ಕಡಬ ಕಡೆಗೆ ತೆರಳುತ್ತಿದ್ದ ಎರ್ಟಿಗಾ ನಡುವೆ ಢಿಕ್ಕಿ ಸಂಭವಿಸಿದೆ. ಅದೇ ಸಂದರ್ಭದಲ್ಲಿ ಗೋಕರ್ಣಕ್ಕೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಎರ್ಟಿಗಾ ಕಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿದೆ. ಘಟನೆಯಲ್ಲಿ ಎಲ್ಲಾ ವಾಹನದವರು ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
- Advertisement -