Tuesday, July 1, 2025
Homeಇತರನಾಳೆ ಭಾರತ್ ಬಂದ್...! ಕರಾವಳಿಯಲ್ಲಿ ವಿವಿಧ ಸಂಘಟನೆಗಳಿಂದ ಬೆಂಬಲ...!

ನಾಳೆ ಭಾರತ್ ಬಂದ್…! ಕರಾವಳಿಯಲ್ಲಿ ವಿವಿಧ ಸಂಘಟನೆಗಳಿಂದ ಬೆಂಬಲ…!

spot_img
- Advertisement -
- Advertisement -

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳ ಕುರಿತು ವಿವಾದ ನಡೆಯುತ್ತಿದೆ. ಯುಪಿಯ ಮುಜಾಫರ್ ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ ಮಹಾಪಂಚಾಯತ್ ನಿಂದ ರೈತ ಮುಖಂಡರ ಚಟುವಟಿಕೆಗಳು ಮತ್ತು ಭೇಟಿಗಳು ಮುಂದುವರಿದಿದೆ. ಈ ಸಂಚಿಕೆಯಲ್ಲಿ, ಆಂದೋಲನದ ರೈತರು 27 ಸೆಪ್ಟೆಂಬರ್‌ನಲ್ಲಿ ಭಾರತ್ ಬಂದ್ ಗೆ ಕರೆ ನೀಡಿದ್ದಾರೆ. ಬಂದ್ ಗೆ ಸಂಬಂಧಿಸಿದ ರೈತರು ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.

ಹೆದ್ದಾರಿ ಬಂದ್: ಭಾರತ್ ಬಂದ್ ಬೆಂಬಲಿಸಿ ರೈತ, ಕಾರ್ಮಿಕ, ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಮತ್ತು ರಾಷ್ಟ್ರೀಯ ಹೆದ್ದಾರಿ ಬಂದ್ ಹೋರಾಟ ಸೋಮವಾರ ಬೆಳಗ್ಗೆ ಬಂಟ್ವಾಳ ಬಿ.ಸಿ. ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಡೆಯಲಿದೆ.

ಸಂಯುಕ್ತ ಕಿಸಾನ್ ಮೋರ್ಚಾದ ಬೇಡಿಕೆಗಳ ಜತೆಗೆ ಉಡುಪಿ- ಕಾಸರಗೋಡು ವಿದ್ಯುತ್ ಮಾರ್ಗ, ಡಿಸಿ ಮನ್ನಾ ಜಮೀನು, ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ, ಮಂಗಳೂರು- ಕಾರ್ಕಳ ಹೆದ್ದಾರಿ ಭೂಸ್ವಾಧೀನದಲ್ಲಿ ಕೃಷಿ ಭೂಮಿಗೆ ನಿಕೃಷ್ಟ ಪರಿಹಾರ ಇತ್ಯಾದಿ ಸ್ಥಳೀಯ ಸಮಸ್ಯೆಗಳ ಬಗ್ಗೆಯೂ ಈ ಪ್ರತಿಭಟನೆಯಲ್ಲಿ ಧ್ವನಿ ಎತ್ತಲಾಗುವುದು ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ತಿಳಿಸಿದ್ದಾರೆ.

ಸಿಪಿಐ, ಸಿಪಿಎಂ ಬೆಂಬಲ: ಬಿ.ಸಿ. ರೋಡ್‌ನಲ್ಲಿ ಬೆಳಗ್ಗೆ ನಡೆಯಲಿರುವ ಪ್ರತಿಭಟನೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಸಿಪಿಐ ದ.ಕ. ಜಿಲ್ಲಾ ಸಮಿತಿಯು ಪೂರ್ಣ ಬೆಂಬಲ ನೀಡಿದೆ. ಪಕ್ಷದ ಕಾರ್ಯಕರ್ತರು ಇದರಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಹಾಗೂ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಮನವಿ ಮಾಡಿದ್ದಾರೆ.

ಎಐಟಿಯುಸಿ ಬೆಂಬಲ: ದೇಶದ ಎಲ್ಲ ರೈತ ಸಂಘಟನೆಗಳು ಕೃಷಿ ಮಸೂದೆಗಳ ವಾಪಸಾತಿ ಮತ್ತಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ನಡೆಯುವ ಭಾರತ ಬಂದ್ ಯಶಸ್ವಿಗೊಳಿಸಲು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಜಿಲ್ಲಾ ಕಾರ್ಯದರ್ಶಿ ಎಚ್.ವಿ. ರಾವ್ ಮನವಿ ಮಾಡಿದ್ದಾರೆ.

ನೈತಿಕ ಬೆಂಬಲ: ಭಾರತ್ ಬಂದ್‌ಗೆ ಸಂಘದ ಯಾವುದೇ ವಿರೋಧವಿಲ್ಲ. ಸಂಪೂರ್ಣವಾಗಿ ನೈತಿಕ ಬೆಂಬಲ ನೀಡುತ್ತೇವೆ ಎಂದು ದ.ಕ. ಜಿಲ್ಲಾ ಆಟೊ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ವಿಷ್ಣುಮೂರ್ತಿ ತಿಳಿಸಿದ್ದಾರೆ.

ಬಂದ್‌ಗೆ ಸಾಕಷ್ಟು ಪ್ರಚಾರ: ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದ ಭಾಗವಾದ ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲವಿದೆ. ಭಾರತ್ ಬಂದ್‌ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಲು ಈಗಾಗಲೇ ಕರಪತ್ರ ಹಂಚಿ ಪ್ರಚಾರ ನಡೆಸಲಾಗಿದೆ. ಬಿ.ಸಿ.ರೋಡ್‌ನಲ್ಲಿ ನಡೆಯುವ ಪ್ರತಿಭಟನೆ, ಹೆದ್ದಾರಿ ಬಂದ್‌ನಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಪ್ರಾಂತ್ಯ ರೈತ ಸಂಘದ ರಾಜ್ಯ ಸಮಿತಿ ಉಪಾಧ್ಯಕ್ಷ ಯಾದವ ಶೆಟ್ಟಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಪ್ರತಿಭಟನೆ: ದೆಹಲಿ ರೈತರ ಹೋರಾಟ ಬೆಂಬಲಿಸಿ, ರೈತ ಕಾರ್ಮಿಕರ ಬೇಡಿಕೆ ಜೊತೆ ಬೆಲೆ ಏರಿಕೆ, ಕಾನೂನುಬಾಹಿರ ಮೈಕ್ರೋ ಕೈಸಾಲ ಮನ್ನಾ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟು ಸೆ.27ರಂದು ಮಧ್ಯಾಹ್ನ 3 ಗಂಟೆಗೆ ನಗರದ ಪುರಭವನ ಸಮೀಪದ ಕ್ಲಾಕ್ ಟವರ್ ಹತ್ತಿರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಕಮ್ಯೂನಿಸ್ಟ್ ಮುಖಂಡ ಬಿ.ಎಂ.ಭಟ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!