ಕಡಬ:ಅಪ್ರಾಪ್ತೆ ಯುವತಿಯ ಮೇಲೆ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಅತ್ಯಾಚಾರವೆಸೆಗಿದ್ದಾನೆ ಎನ್ನುವ ಆರೋಪಕ್ಕೆ, ಇದೀಗ ಸಂತ್ರಸ್ತೆ ಯುವತಿಯ ತಂದೆ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ.
2 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ತನ್ನ ಮಗಳ ಮೇಲೆ ಕಡಬ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ಅತ್ಯಾಚಾರ ನಡೆಸಿದ್ದು, ಮಗಳು ಗರ್ಭವತಿಯಾಗುತ್ತಿದ್ದಂತೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಹೇಳಿದ್ದಾನೆ.2 ವರ್ಷಗಳ ಹಿಂದೆ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಕುರಿತು ಅದೇ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆ ಬಾಲಕಿ ಮನೆಗೆ ಸಮನ್ಸ್ ಕೊಡುವ ನೆಪದಲ್ಲಿ ಪೊಲೀಸ್ ಪೇದೆ ಶಿವರಾಜ್ ಬರುತ್ತಿದ್ದ. ಹೀಗೆ ಪರಿಚಿತನಾಗಿದ್ದ ಶಿವರಾಜ್ ಸಂತ್ರಸ್ತೆ ಮೇಲೆಯೇ ಅತ್ಯಾಚಾರವೆಸಗಿದ್ದಾನೆ. ಮಗಳು ಗರ್ಭವತಿಯಾಗುತ್ತಿದ್ದಂತೆ ಗರ್ಭಪಾತಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ದೂರಿದ್ದಾರೆ.
ಅತ್ಯಾಚಾರ ಎಸಗಿರುವ ಶಿವರಾಜ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು, ಮತ್ತು ನನ್ನ ಮಗಳು ಹಾಗೂ ಪತ್ನಿ ಶಿವರಾಜ್ ಅವನ ಸುಪರ್ಧಿಯಲ್ಲಿ ಮಂಗಳೂರಿನ ಅಜ್ಞಾತ ಸ್ಥಳದಲ್ಲಿರುವ ಅವರನ್ನು ಪತ್ತೆ ಹಚ್ಚಬೇಕು, ಇದಕ್ಕೆಲ್ಲ ಪೋಲಿಸ್ ಪ್ರಭಾವ ಬಳಸಿ ನಮ್ಮನ್ನು ಬೆದರಿಸುತ್ತಿರುವ ಶಿವರಾಜ್ ವಿಚಾರಣೆ ನಡೆಸಿದಾಗ ಎಲ್ಲ ವಿಚಾರ ಬಹಿರಂಗವಾಗಲಿದೆ, ಆದುದರಿಂದ ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಕೊಡುವಿರಾ ಎಂದು ಅವರು ವಿನಂತಿಸಿದ್ದಾರೆ.
ಈ ಮಧ್ಯೆ ಆರೋಪಿಯನ್ನು ಅಮಾನತುಗೊಳಿಸಿ, ಕ್ರಮ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ,ಇನ್ನಾದರೂ ಕ್ರಮ ಕೈಗೊಳ್ಳಬಹುದಲ್ಲವೇ ಎಂದು ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಭಾಸ್ಕರ ಧರ್ಮಸ್ಥಳ, ಕಡಬ ಪ್ರಖಂಡ ಅಧ್ಯಕ್ಷ ರಾಧಾಕೃಷ್ಣ , ಕಾರ್ಯದರ್ಶಿ ಪ್ರಮೋದ್ ರೈ ಅವರುಗಳು ಎಚ್ಚರಿಸಿದ್ದಾರೆ.


